ಮೆಟ್ರೋ ಬಗ್ಗೆ

ಮೆಟ್ರೋ ಬಗ್ಗೆ

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿ.ಎ೦.ಆರ್.ಸಿ.ಎಲ್).

ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾಗಿದ್ದು, ಬೆಂಗಳೂರು ಮೆಟ್ರೋ ರೈಲು ಯೋಜನೆಯ ಅನುಷ್ಠಾನ ಮತ್ತು ಕಾರ್ಯಾಚರಣೆಯ ಜವಾಬ್ದಾರಿಯನ್ನು ವಹಿಸಲಾದ ವಿಶೇಷ ಉದ್ದೇಶದ ವಾಹಕವಾಗಿದೆ.

'ನಮ್ಮ ಮೆಟ್ರೋ' ಎಂದು ಹೆಸರಿಸಲಾದ ಬೆಂಗಳೂರು ಮೆಟ್ರೋ, ಬೆಂಗಳೂರು ನಗರದ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ, ಮುಖ್ಯವಾಗಿ ಸುರಕ್ಷಿತ, ತ್ವರಿತ, ವಿಶ್ವಾಸಾರ್ಹ ಮತ್ತು ಆರಾಮದಾಯಕ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಒದಗಿಸುತ್ತದೆ. ಇದಲ್ಲದೆ, ನಮ್ಮ ಮೆಟ್ರೋ ಬೆಂಗಳೂರು ನಗರಕ್ಕೆ ಪ್ರಮುಖ ಪರಿಸರ ಸ್ನೇಹಿ ಸೇರ್ಪಡೆಯಾಗಿದೆ, ಏಕೆಂದರೆ ಇದು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಗಮನಾರ್ಹವಾಗಿ ಕೊಡುಗೆ ನೀಡುತ್ತದೆ.

ಮೆಟ್ರೋ ಸೇವೆಗಳು 73.81 ಕಿ.ಮೀ. ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿವೆ.

  1. ಪೂರ್ವ-ಪಶ್ಚಿಮ ಕಾರಿಡಾರ್ 43.49 ಕಿಮೀ: ಪೂರ್ವದಲ್ಲಿ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಿಂದ ಪ್ರಾರಂಭವಾಗಿ ಪಶ್ಚಿಮದಲ್ಲಿ ಚಲ್ಲಘಟ್ಟ ಟರ್ಮಿನಲ್‌ನಲ್ಲಿ ಕೊನೆಗೊಳ್ಳುತ್ತದೆ
  2. ಉತ್ತರ-ದಕ್ಷಿಣ ಕಾರಿಡಾರ್ 30.32 ಕಿಮೀ ಉತ್ತರದಲ್ಲಿ ನಾಗಸಂದ್ರದಲ್ಲಿ ಪ್ರಾರಂಭವಾಗಿ ದಕ್ಷಿಣದಲ್ಲಿ ಸಿಲ್ಕ್ ಇನ್‌ಸ್ಟಿಟ್ಯೂಟ್‌ ನಲ್ಲಿ ಕೊನೆಗೊಳ್ಳುತ್ತದೆ.

ಇದು ಸ್ಟ್ಯಾಂಡರ್ಡ್ ಗೇಜ್ ನಲ್ಲಿ 750V DC ಥರ್ಡ್ ರೈಲ್ ಟ್ರಾಕ್ಷನ್ ನೊಂದಿಗೆ ಕಾರ್ಯಾರಂಭ ಮಾಡಿದ ಭಾರತದ ಮೊದಲ ಮೆಟ್ರೋ ರೈಲು ಯೋಜನೆಯಾಗಿದೆ.

about
video
shape1shape2

ಮೆಟ್ರೋ ಆಕರ್ಷಣೆಗಳು

ರೀಚಾರ್ಜ್

ಸ್ಮಾರ್ಟ್ ಕಾರ್ಡ್ ಟಾಪ್ ಅಪ್

ಈಗ ನೀವು 'ನಮ್ಮ ಮೆಟ್ರೋ', 'Paytm' ಮತ್ತು 'Amazon Pay' ಮೊಬೈಲ್ ಅಪ್ಲಿಕೇಶನ್ಗಳ ಮೂಲಕವೂ ನಿಮ್ಮ ಬೆಂಗಳೂರು ಮೆಟ್ರೋ ಸ್ಮಾರ್ಟ್ ಕಾರ್ಡ್ಗಳನ್ನು ರೀಚಾರ್ಜ್ ಮಾಡಬಹುದು.

ಲಾಗಿನ್ ಸಮಯದಲ್ಲಿ ಯಾವುದೇ ಸಮಸ್ಯೆ ಎದುರಾದರೆ, ದಯವಿಟ್ಟು ಬಿಎಂಆರ್ಸಿಎಲ್ ಸಹಾಯವಾಣಿ 1800 425 12345 ಅನ್ನು ಸಂಪರ್ಕಿಸಿ ಅಥವಾ travelhelp@bmrc.co.in.

app-img
shape4

Loading...